ಮುರುಳ್ಯ ಶಾಂತಿನಗರ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಮತ್ತು ಪ್ರತಿಭಾ ದಿನೋತ್ಸವ

0

ಮುರುಳ್ಯ ಶಾಂತಿಗರ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಮತ್ತು ಪ್ರತಿಭಾದಿನೋತ್ಸವ ಜ. 26ರಂದು ನಡೆಯಿತು.


ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದಿನೇಶ್ ನಡುಬೈಲು ಧ್ವಜಾರೋಹಣಗೈದು ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹಿರಿಯರಾದ ಶೇಷಪ್ಪ ಗೌಡ ಹುದೇರಿ ಪ್ರತಿಭಾ ದಿನೋತ್ಸವ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರಂಗಮಂದಿರ ದಾನಿಗಳಾದ ಶಿವಪ್ಪ ಗೌಡ ಕುದ್ಪಾಜೆ, ಮುರುಳ್ಯ ಗ್ರಾ.ಪಂ. ಸದಸ್ಯೆ ಶ್ರೀಮತಿ ಶೀಲಾವತಿ ಗೋಳ್ತಿಲ, ಮಾಯಿಲಪ್ಪ ಗೌಡ ಪಿಲಂಕುಜೆ, ಹಿರಿಯ ವಿದ್ಯಾರ್ಥಿ ಹಾಗೂ ನ್ಯಾಯವಾದಿ ಜಗದೀಶ್ ಹುದೇರಿ, ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಕ ಸುಭಾಷ್ ಶಾಂತಿನಗರ, ಸುಳ್ಯ ಸುದ್ದಿ ಬಿಡುಗಡೆ ವಾರಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ, ಕಾಣಿಯೂರು ಸರಕಾರಿ ಪ್ರೌಢಶಾಲಾ ಸಹಶಿಕ್ಷಕಿ ಶ್ರೀಮತಿ ಕುಸುಮಾವತಿ ಕೆ ಭಾಗವಹಿಸಿದ್ದರು. ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಬೇಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾ ಸ್ವಾಗತಿಸಿ, ಶಾಲಾ ವರದಿ ವಾಚಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ಸುಚಿತಾ ಬಹುಮಾನ ವಿಜೇತ ವಿದ್ಯಾರ್ಥಿ ಪಟ್ಟಿ ವಾಚಿಸಿದರು. ಸಹ ಶಿಕ್ಷಕಿ ಶ್ರೀಮತಿ ಉಷಾ ದತ್ತಿನಿಧಿ ಪುರಸ್ಕೃತರ ಹೆಸರು ವಾಚಿಸಿ, ವಂದಿಸಿದರು. ಶಾಲಾ ಸಹಶಿಕ್ಷಕ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.