ಗಾಂಧಿನಗರ ಕೆಪಿಎಸ್ ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿಯವರಿಗೆ ಬೀಳ್ಕೊಡುಗೆ

0

ಸುಳ್ಯ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇಲ್ಲಿಯ ಮುಖ್ಯ ಶಿಕ್ಷಕರಾಗಿದ್ದು ಜ.31ರಂದು ಸೇವಾ ನಿವೃತ್ತಿಗೊಂಡ ಪದ್ಮನಾಭ ಅತ್ಯಾಡಿಯವರಿಗೆ ಬೀಳ್ಕೊಡುಗೆ, ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಕೋಟೆ ಫೌಂಡೇಶನ್ ವತಿಯಿಂದ ಸ್ಮಾರ್ಟ್ ಟಿವಿ ಕೊಡುಗೆ ಕಾರ್ಯಕ್ರಮ ಜ.31ರಂದು ಶಾಲಾ ವಠಾರದಲ್ಲಿ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ಭಾಗೀರಥಿ ಮುರುಳ್ಯವರು ಕಾರ್ಯಕ್ರಮ ಉದ್ಘಾಟಿಸಿ, ನಿವೃತ್ತರಾದ ಮುಖ್ಯ ಶಿಕ್ಷಕ ಪದ್ಮನಾಭ ಅತ್ಯಾಡಿ – ಶ್ರೀಮತಿ ಮಂಜುಳಾ ದಂಪತಿಗಳನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು “ಪದ್ಮನಾಭ ಅತ್ಯಾಡಿಯವರು ತಮ್ಮ ಸೇವಾವಧಿಯಲ್ಲಿ ಉತ್ತಮ ಸೇವೆ ನೀಡಿದ್ದಾರೆ” ಎಂದು ಹೇಳಿದರು.

ಅಧ್ಯಕ್ಷತೆಯನ್ನು ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ., ನಿವೃತ್ತ ಶಿಕ್ಷಣಾಧಿಕಾರಿ ರಮೇಶ್ ಬಿ.ಇ., ಸುಳ್ಯ ಬಿ.ಇ.ಒ. ಆಗಿ ಸೇವೆ ಸಲ್ಲಿಸಿ, ಪ್ರಸ್ತುತ ಹುಣಸೂರು ಬಿ.ಇ.ಒ. ಆಗಿರುವ ಎಸ್.ಪಿ. ಮಹಾದೇವ, ನ.ಪಂ. ಸದಸ್ಯ ಶರೀಫ್ ಕಂಠಿ, ಗಾಂಧಿನಗರ ಕೆಪಿಎಸ್ ಕಾರ್ಯಾಧ್ಯಕ್ಷ ಚಿದಾನಂದ ಕುದ್ಪಾಜೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರುಗಳಾದ ಜೆ.ಕೆ. ರೈ, ಇಬ್ರಾಹಿಂ ಕೆ.ಬಿ.,
ಕೋಟೆ ಫೌಂಡೇಶನ್ ನ ಸುಳ್ಯ ಸಂಚಾಲಕ ಪ್ರದೀಪ್ ಉಬರಡ್ಕ, ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಚಂದ್ರಾವತಿ, ಗಾಂಧಿನಗರ ಕೆಪಿಎಸ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಲಕ್ಷ್ಮೀ, ಕೆಪಿಎಸ್ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಪ್ರದೀಪ್ ಮೊದಲಾದವರು ವೇದಿಕೆಯಲ್ಲಿದ್ದರು.

ಗಾಂಧಿನಗರ ಕೆ.ಪಿ.ಎಸ್. ಪ್ರೌಢಶಾಲಾ ಸಹ ಶಿಕ್ಷಕ ಚಿನ್ನಪ್ಪ ಗೌಡ ಅಭಿನಂದನಾ ಭಾಷಣ ಮಾಡಿದರು.

ಸಹಶಿಕ್ಷಕಿ ಅಶ್ವಿನಿ ಸ್ವಾಗತಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ಚಂದ್ರಾವತಿ ವರದಿ ಮಂಡಿಸಿದರು. ಶಿಕ್ಷಕಿ ರಾಜೇಶ್ವರಿ ಸನ್ಮಾನಿತರನ್ನು ಪರಿಚಯಿಸಿದರು.
ಶಿಕ್ಷಕಿ ಪುಷ್ಪಾವತಿ‌ ಹಾಗೂ ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ‌ ಕಾರ್ಯಕ್ರಮಕ್ಕೂ ಮೊದಲು ಹಾಗೂ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು.