ಕುಕ್ಕೆ ಸುಬ್ರಹ್ಮಣ್ಯಕ್ಕೆ ತಮಿಳು ಚಿತ್ರ ನಿರ್ದೇಶಕ ಅತ್ಲೇ ಭೇಟಿ, ಅನ್ನದಾನಕ್ಕೆ ದೇಣಿಗೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು .

ನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ ನೀಡಿ ಗೌರವಿಸಿದರು. ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಉಪಸ್ಥಿತರಿದ್ದರು.