ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ 51 ನೇ ವರ್ಷದ ಏಕಾಹ ಭಜನೆ ಯು ಫೆ.2 ರಂದು ಜರುಗಿತು.

ಅರ್ಚಕ ಅಭಿರಾಮ್ ಭಟ್ ರವರ ನೇತೃತ್ವದಲ್ಲಿ ದೀಪ ಸ್ಥಾಪನೆಯಾಗಿ ಭಜನಾ ಸಂಕೀರ್ತನೆಯು ಆರಂಭಗೊಂಡಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಅಹರ್ನಿಶಿ 24 ಗಂಟೆಗಳ ಕಾಲ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕಡೆಗಳಿಂದ ಉಲುಪೆ ಮೆರವಣಿಗೆ ಸಾಗಿ ಬಂತು. ರಾತ್ರಿ ಮಹಾಪೂಜೆಯಾಗಿ ಪ್ರಸಾದವಿತರಣೆಯಾಯಿತು. ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಅಧ್ಯಕ್ಷ ರತ್ನಾಕರ ರೈ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಸರ್ವರನ್ನು ಸ್ವಾಗತಿಸಿದರು.
