ಮಡಪ್ಪಾಡಿ : ಅರಂತೋಡು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಶ್ರಮದಾನ

0

ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಇದರ ವತಿಯಿಂದ ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಶ್ರಮದಾನ ಫೆ. 1ರಂದು ನಡೆಯಿತು.

ಎಸ್. ಡಿ. ಎಂ. ಸಿ. ಅಧ್ಯಕ್ಷ ಸದಾನಂದ ಬಲ್ಕಜೆ ದೀಪ ಬೆಳಗಿಸಿ ಶ್ರಮದಾನಕ್ಕೆ ಚಾಲನೆ ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಕುಶಾಲಪ್ಪ ಧ್ವಜಾರೋಹಣ ನೆರವೇರಿಸಿದರು.

ಸಂಘಟನೆಯ ಸದಸ್ಯರು ಶ್ರಮದಾನಲ್ಲಿ ಪಾಲ್ಗೊಂಡರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ. ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.