ಜಬ್ಬಾರ್ ಸಮೋ ಅವರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ

0

ಹಿರಿಯ ವಿದ್ವಾಂಸ ದಿ| ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಯಕ್ಷಗಾನ ಅರ್ಥಧಾರಿ ಮತ್ತು ವೇಷಧಾರಿ ಜಬ್ಬಾ‌ರ್ ಸಮೋ ಆಯ್ಕೆಯಾಗಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನೆ ಕೇಂದ್ರದ ಮೂಲಕ ಈ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು. ಪ್ರಶಸ್ತಿಯು 25 ಸಾವಿರ ರೂ. ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ. ಫೆ.22ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಸಂಪಾಜೆಯವರಾದ ಜಬ್ಬಾರ್ ಸಮೊ1963ರಲ್ಲಿ ಎಸ್. ಮೊದೀನ್ ಕುಂಞ ಹಾಗೂ ಬೀಫಾತಿಮ ಅವರ ಪುತ್ರನಾಗಿ ಜನಿಸಿದರು. ವಿಶಿಷ್ಟವಾದ ಅರ್ಥಗಾರಿಕೆಯೊಂದಿಗೆ ನಾಡಿನ ಹಿರಿಯ ಕಲಾವಿದರೊಂದಿಗೆ ವಿವಿಧ ಪಾತ್ರಗಳನ್ನು ನಿಭಾಯಿಸಿದ್ದಾರೆ. ಹಲವಾರು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿದ್ದಾರೆ. ರೇಷ್ಮೆ ಇಲಾಖೆಯಲ್ಲಿ ಸೇವೆಯಲ್ಲಿದ್ದ ಅವರು ಸ್ವಯಂ ನಿವೃತ್ತಿ ಪಡೆದಿದ್ದರು. ಯಕ್ಷಗಾನ ಅಕಾಡೆಮಿ ಸದಸ್ಯರೂ ಆಗಿದ್ದಾರೆ..