ತಾಲೂಕು ಆಡಳಿತ ಮತ್ತು ಸವಿತಾ ಸಮಾಜದ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ

0

ನಾಡಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಹಾಗೂ ಸವಿತಾ ಸಮಾಜ ಸುಳ್ಯ ಇದರ ಆಶ್ರಯದಲ್ಲಿ ಮಹಿಳಾ ಘಟಕ, ಯುವ ಘಟಕ ಮತ್ತು ಬಾರ್ಬರ್ಸ್ ಅಸೋಸಿಯೇಶನ್ ಸಹಯೋಗದಲ್ಲಿ ರಥಸಪ್ತಮಿ ದಿನವಾದ ಫೆ.4 ರಂದು ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು.


ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ. ನೀರಬಿದಿರೆ ವಹಿಸಿದ್ದರು. ನಾಡಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಮಂಜುಳ ರವರು ಸವಿತಾ ಮಹರ್ಷಿ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಚಂದ್ರಮತಿ ಯವರು ಸವಿತಾ ಮಹರ್ಷಿ ಕುರಿತು ಉಪನ್ಯಾಸ ನೀಡಿದರು. ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಗುರುರಾಜ ಅಜ್ಜಾವರ ಶುಭಹಾರೈಸಿ ಮಾತನಾಡಿದರು.


ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ್, ನ.ಪಂ.ಮುಖ್ಯಾಧಿಕಾರಿ ಸುಧಾಕರ ಎಂ.ಎಚ್., ಸವಿತಾ ಸಮಾಜದ ಗೌರವಾಧ್ಯಕ್ಷ ವಸಂತ ಮೂರಾಜೆ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಇಂದಿರಾ ಪದ್ಮನಾಭ, ಯುವ ಘಟಕದ ಅಧ್ಯಕ್ಷ ಪ್ರಸನ್ನ ಪಂಜ , ಬಾರ್ಬರ್ಸ್ ಅಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗುರುರಾಜ್ ಸ್ವಾಗತಿಸಿ, ಕಾರ್ಯದರ್ಶಿ ಜಯಪ್ರಕಾಶ್ ಮಂಡೆಕೋಲು ವಂದಿಸಿದರು. ಗೌರವ ಸಲಹೆಗಾರ ಹರೀಶ್ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು.