ಮಾಣಿ ಮೈಸೂರು ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ದುರ್ಘಟನೆ ಯಲ್ಲಿ ಬೈಕ್ ಸವಾರನ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದುಸ್ಥಳೀಯರು ಅವರನ್ನು ಸುಳ್ಯದ ಕೆ ವಿ ಜಿ ಆಸ್ಪತ್ರೆಗೆ ದಾಖಲಿಸಲಾಯಿತು.
ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಗಾಯಾಳು ಮೈಸೂರು ಮೂಲದ ಹರೀಶ್ ಎಂಬುವವರಾಗಿದ್ದು ಅವರು ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ.
ಇಂದು ಬೆಳಿಗ್ಗೆ ಮೈಸೂರಿನಿಂದ ತಮ್ಮ ಬೈಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬೈಕಿಗೆ ಕಾರು ಗುದ್ದಿದ ಕಾರಣ ಘಟನೆ ಸಂಭವಿಸಿದೆ ಎಂದು ವೈರಲಾಗಿದ್ದು,ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆ ಬಳಿಕವೇ ತಿಳಿಯಬೇಕಾಗಿದೆ.