ಪಂಜ ಸೀಮೆ ದೇವಳದಲ್ಲಿ ವರ್ಷಾವಧಿ ಜಾತ್ರೋತ್ಸವ : ದೀಪೋತ್ಸವ-ದೈವಗಳ ನರ್ತನ ಸೇವೆ

0


ಇಂದು (ಫೆ.6) ರಾತ್ರಿ ಬ್ರಹ್ಮ ರಥೋತ್ಸವ


ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.24 ರಿಂದ ಫೆ.9 ರ ತನಕ , ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು.
ಫೆ.5 ರಂದು ರಾತ್ರಿ ದೀಪೋತ್ಸವ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಬೀದಿಕಟ್ಟೆ ಪೂಜೆ, ಕಾಚುಕುಜುಂಬ, ಶಿರಾಡಿ, ರುದ್ರಚಾಮುಂಡಿ ದೈವಗಳ ನರ್ತನ ಸೇವೆ, ವಸಂತ ಕಟ್ಟೆಪೂಜೆ, ಶ್ರೀ ದೇವರ ಉತ್ಸವ, ಅನ್ನಸಂತರ್ಪಣೆ ನಡೆಯಿತು.


.
ಫೆ.6 ಪೂರ್ವಾಹ್ನ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ರಾತ್ರಿ ಗಂಟೆ 11 ರಿಂದ ಬ್ರಹ್ಮ ರಥೋತ್ಸವ, ಕಾಚುಕುಜುಂಬ ದೈವದ ನರ್ತನ ಸೇವೆ. ಮಹಾಪೂಜೆ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಲಿದೆ.
ಫೆ.7 ಮುಂಜಾನೆ ಕವಾಟೋದ್ಘಾಟನೆ, ದೇವರಿಗೆ ಅಭಿಷೇಕ, ಪೂರ್ವಾಹ್ನ ಬಲಿ ಹೊರಟು, ಕಾಚುಕುಜುಂಬ ದೈವದ ನರ್ತನ ಸೇವೆಯೊಂದಿಗೆ ನಾಗತೀರ್ಥ ಜಳಕದ ಹೊಳೆಯಲ್ಲಿ ಶ್ರೀ ದೇವರ ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ, ಅನ್ನಸಂತರ್ಪಣೆ, ಅಪರಾಹ್ನ ದೇಗುಲದಿಂದ ಶ್ರೀ ಕಾಚುಕುಜುಂಬ ಉಳ್ಳಾಕುಲು ದೈವಗಳ ಭಂಡಾರವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿಬೈಲಿಗೆ ಹೋಗಿ ಸಂಜೆ ಧ್ವಜಾರೋಹಣ, ಭಜನಾ ಕಾರ್ಯಕ್ರಮ. ರಾತ್ರಿ ಶ್ರೀ ಕಾಚುಕುಜುಂಬ ದೈವದ ನೇಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಫೆ.8.ರಂದು ಮುಂಜಾನೆ ಶ್ರೀ ಉಳ್ಳಾಕುಲು ದೈವದ ನೇಮ, ಪ್ರಸಾದ ವಿತರಣೆ, ಧ್ವಜಾವರೋಹಣ, ದೈವದ ಭಂಡಾರವನ್ನು ಮೆರವಣಿಗೆಯಲ್ಲಿ ದೇಗುಲದ ಭಂಡಾರ ಮನೆಗೆ ತರುವುದು. ಶ್ರೀ ದೇವಳ ದಲ್ಲಿ ಸಂಪ್ರೋಕ್ಷಣೆ. ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಪುತ್ಯದಿಂದ ಶಿರಾಡಿ ದೈವದ ಭಂಡಾರ ತರುವುದು.ಫೆ.9 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ, ಶ್ರೀ ರುದ್ರ ಚಾಮುಂಡಿ ದೈವದ ನೇಮ,ಅನ್ನಸಂತರ್ಪಣೆ ನಡೆಯಲಿದೆ.