ವ್ಯವಸ್ಥಾಪನಾ ಸಮಿತಿಯಿಂದ ಪೊಲೀಸ್ ದೂರು
ಪಂಜ ಜಾತ್ರೋತ್ಸವ ಸಂದರ್ಭದಲ್ಲಿ ರಥಬೀದಿಯಲ್ಲಿ ತಾತ್ಕಾಲಿಕ ಸಂತೆ ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಂದ ಪಂಜ ಗ್ರಾ.ಪಂ. ನವರು ಕರ ವಸೂಲಿ ಮಾಡುತ್ತಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರುರವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ಫೆ. 5ರಂದು ರಾತ್ರಿ ನಡೆದಿದೆ.















ದೇವಸ್ಥಾನದ ಆಡಳಿತ ಮಂಡಳಿ ಸಭೆಯ ನಿರ್ಣಯದಂತೆ ಟೆಂಡರ್ ಮೂಲಕ ವ್ಯಾಪಾರಿಗಳಿಗೆ ಅವಕಾಶ ನೀಡಲಾಗಿದೆ. ಆದಾಗ್ಯೂ ಸ್ಥಳೀಯ ಗ್ರಾಮ ಪಂಚಾಯತ್ ಪಿ.ಡಿ.ಒ ಮತ್ತು ಸಿಬ್ಬಂದಿಳು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಾರದೆ ಸಂತೆ ವ್ಯಾಪಾರಿಗಳಿಂದ ಕರ ವಸೂಲಿ ಮಾಡಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳವಂತೆ ದೂರಿನಲ್ಲಿ ತಿಳಿಸಲಾಗಿದೆ.










