ಕಡಿಮೆ ಶುಲ್ಕದಲ್ಲಿ ಪಟ್ಟಣ ಮಾದರಿಯ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದಲ್ಲಿ : ಎನ್.ಆರ್.ಹರಿಕುಮಾರ್
ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗದ ಅಡ್ಕಾರ್ ಆರ್ಕೆಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ ಜ.7 ರಂದು ಸುಳ್ಯದ ಲಯನ್ಸ್ ಕ್ಲಬ್ ಹಾಲ್ನಲ್ಲಿ ನಡೆಯಿತು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಇದರ ಅಧ್ಯಕ್ಷ ಸದಾನಂದ ಮಾವಂಜಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಡೆನ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಬೆಂಗಳೂರು ಇದರ ನಿರ್ದೇಶಕಾರದ ಎನ್.ಆರ್ ಹರಿಕುಮಾರ್ ಆಗಮಿಸಿ ಮಾತನಾಡಿ ಕಡಿಮೆ ಶುಲ್ಕದಲ್ಲಿ ಪಟ್ಟಣ ಮಾದರಿಯ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದಲ್ಲಿ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನೀಡುತ್ತಿದೆ.
ಬೆಂಗಳೂರಿನ0ತಹ ಪಟ್ಟಣದಲ್ಲಿ ಈ ಮಾದರಿಯ ಶಿಕ್ಷಣ ಪದ್ಧತಿಗೆ 80ರಿಂದ 1 ಲಕ್ಷದವರೆಗೆ ಶುಲ್ಕ ತೆಗೆದುಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ನೀವು ಅದೃಷ್ಟವಂತರು ಎಂದರು.
ಹಾಗೆಯೇ ಪ್ರತಿಯೊಂದು ಮಗುವಿನಲ್ಲೂ ಸುಪ್ತವಾಗಿರುವ ಪ್ರತಿಭೆಗಳು ಅಡಗಿದ್ದು, ಅವುಗಳನ್ನು ಹೆಕ್ಕಿ ತೆಗೆಯುವ ಶಿಕ್ಷಣ ಹಾಗೂ ಪೋಷಕರ ಮೂಲ ಉದ್ದೇಶವಾಗಿದೆ ಎಂದರು.







ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಶುಭಕರ ಬಿ.ಸಿ, ಟ್ರಸ್ಟಿ, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಸಿಇಒ ಕೆ.ಟಿ.ವಿಶ್ವನಾಥ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ್ ಪೆರಾಲು ಉಪಸ್ಥಿತರಿದ್ದರು.

ಶಾಲಾ ಸಂಚಾಲಕಿ ಗೀತಾಂಜಲಿ ಟಿ.ಜಿ. ಶಾಲಾ ವರದಿ ವಾಚಿಸಿದರು.
ಪೋಷಕರಾದ ಶ್ರೀಮತಿ ವಿನುತಾ ಕಾರ್ಯಕ್ರಮ ನಿರೂಪಿಸಿದರು.
ಅಕ್ಷತಾ ಸ್ವಾಗತಿಸಿ, ಜ್ಯೋತಿ ವಂದಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿದರು.
ಅನಿಸಿಕೆ ವ್ಯಕ್ತಪಡಿಸಿದರು.
ಶಿಕ್ಷಕರಾದ ಶ್ರೀಮತಿ ಲಕ್ಷ್ಮಿ ಶೆಟ್ಟಿ, ಪ್ರಮೀಳ, ದೀಕ್ಷಾ, ಸುಕನ್ಯರವರು ಸಹಕರಿಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ, ಪೋಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.










