ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರವರು ಕಾರ್ಯಕ್ರಮದಲ್ಲಿ ಭಾಗಿ
ಶಾಲೆಯ ಅಭಿವೃದ್ಧಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಶುಭಹಾರೈಕೆ

ಗಾಂಧಿನಗರ ಕೆಪಿಎಸ್ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಫೆಬ್ರವರಿ 13 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ರವರು ಭಾಗವಹಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಳ್ಯ ನನಗೆ ಮೊದಲಿಂದಲೇ ಬಹಳ ನೆಚ್ಚಿನ ಊರಾಗಿದ್ದು ನನಗೆ ಪದ್ಮಶ್ರೀ ಪ್ರಶಸ್ತಿ ಬಂದ ಸಮಯ ಸುಳ್ಳದ ಜನತೆ ನನಗೆ ಅತೀವ ಗೌರವವನ್ನು ನೀಡಿದ್ದಾರೆ. ಅಲ್ಲದೆ ಸುಳ್ಯದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ನನ್ನನ್ನು ಆಹ್ವಾನಿಸಿ ನನ್ನನ್ನು ಗೌರವಿಸುವ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.ಅದಕ್ಕಾಗಿ ಈ ಊರಿನ ಸರ್ವರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಕಾರ್ಯಾಧ್ಯಕ್ಷ ಚಿದಾನಂದ ಕುತ್ಪಾಜೆಯವರು ವಹಿಸಿದ್ದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರುಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ವಿದ್ಯಾರ್ಥಿಗಳು ಕೂಡ ಈ ಸಂದರ್ಭದಲ್ಲಿ ತಮ್ಮ ಕಾಲೇಜಿನ ಅನುಭವಗಳನ್ನು ಮಾತಿನ ಮೂಲಕ ಹಂಚಿಕೊಂಡರು.















ವೇದಿಕೆಯಲ್ಲಿ ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಉಪ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಲಕ್ಷ್ಮಿ,ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರದೀಪ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವಿದ್ಯಾರ್ಥಿನಿಯರಾದ ಅಮೂಲ್ಯ ಹಾಗೂ ಅರ್ಫಾನ ಕಾರ್ಯಕ್ರಮ ನಿರೂಪಣೆ ಮಾಡಿದರು.
ಶಾಲೆಗೆ ಭೇಟಿ ನೀಡಿದ ಹಾಜಬ್ಬ ರವರು ಇತ್ತೀಚಿಗೆ ಶಾಲೆಯಲ್ಲಿ ನಿರ್ಮಾಣಗೊಂಡ ವಿಜ್ಞಾನ ಮಾದರಿ ಕೊಠಡಿಯನ್ನು ಸಂದರ್ಶಿಸಿ ಶಿಕ್ಷಕರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕರುಗಳು, ಕಾಲೇಜಿನ ಉಪನ್ಯಾಸಕರುಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










