ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ನೇಮಕ

0

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನ್ನಾಗಿ ಹಿರಿಯ ಮುಖಂಡ ರಾಧಾಕೃಷ್ಣ ಬೊಳ್ಳೂರು ರವರನ್ನು ನೇಮಕಗೊಳಿಸಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ರಾಧಾಕೃಷ್ಣ ಬೊಳ್ಳೂರು ರವರಿಗೆ ನೇಮಕಾತಿ ಆದೇಶವನ್ನು ಇಂದು ಹಸ್ತಾಂತರಿಸಿದರು.


‌ರಾಧಾಕೃಷ್ಣ ಬೊಳ್ಳೂರುರವರು ಹಿಂದೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿದ್ದರಲ್ಲದೆ, ಜಾಲ್ಸೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ಜಿಲ್ಲಾ ಪಂಚಾಯತ್ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಅಮರಮುಡ್ನೂರು ಗ್ರಸಮ ಪಂಚಾಯತ್ ಅಧ್ಯಕ್ಷರಾಗಿ ಎರಡು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಬಳಿಕ ಅಸಮಾಧಾನದ ಹಿನ್ನೆಲೆಯಲ್ಲಿ ಬಿ.ಜೆ.ಪಿ. ಸೇರಿದ್ದ ಅವರು ಅಲ್ಲಿ ಎ.ಪಿ.ಎಂ.ಸಿ. ಸದಸ್ಯರಾಗಿ ಮತ್ತು ತಾ.ಪಂ.ಸದಸ್ಯರಾಗಿ ಚುನಾಯಿತರಾಗಿದ್ದರಲ್ಲದೆ ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷರೂ ಆಗಿದ್ದರು. ಬಿ.ಜೆ.ಪಿ. ಜಿಲ್ಲಾ ರೈತ ಮೋರ್ಛಾ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮರಳಿ ಕಾಂಗ್ರೆಸ್ ಸೇರಿದ್ದ ಅವರು ಸಹಕಾರಿ ಚುನಾವಣೆಗಳಲ್ಲಿ ಸಕ್ರಿಯರಾಗಿದ್ದರು. ಇದೀಗ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷತೆಯ ಜವಾಬ್ದಾರಿ ಅವರಿಗೆ ಲಭಿಸಿದ್ದು, ಮುಂಬರುವ ತಾ.ಪಂ., ಜಿ.ಪಂ. ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದಾಗಿ ಹೇಳಿದ್ದಾರೆ.