ಕೆ ವಿ ಜಿ ಐ ಪಿ ಎಸ್ ನ ಪ್ರತೀಕ್ಷ ರವರಿಗೆ ಸಾಧನಾ ಪ್ರಶಸ್ತಿ 2024-2025

0

ಲಯನ್ಸ್ ಇಂಟರ್ ನ್ಯಾಷನಲ್ ಪೀಸ್ ಪೋಸ್ಟರ್ 2024-25 ಪೀಸ್ ವಿಥೌಟ್ ಲಿಮಿಟ್ಸ್ ಇವರು ಕೊಡುವ ಸಾಧನಾ ಪ್ರಶಸ್ತಿಯನ್ನು ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಪ್ರತೀಕ್ಷಾ ಪಡೆದುಕೊಂಡಿದ್ದಾರೆ.

ಇವರಿಗೆ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ಪ್ರಾಂಶುಪಾಲ ಅರುಣ್ ಕುಮಾರ್ ಎಸ್, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನಿತ್ತು  ಅಭಿನಂದಿಸಿದರು.

ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ. ವಿ ಮತ್ತು ಎಲ್ಲಾ ಶಿಕ್ಷಕ, ಶಿಕ್ಷಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದರು.