2023 ಡಿಸೆಂಬರ್ ನಲ್ಲಿ ಸುಳ್ಯ ಹಳೆಗೇಟಿನಲ್ಲಿ ಬೈಕ್ ಗೆ ಬಸ್ ಢಿಕ್ಕಿಯಾದ ಪ್ರಕಣದ ವಿಚಾರಣೆ ಸುಳ್ಯ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು, ಚಾಲಕನಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿತ ಶಶಿಕಾಂತ್ ಕೆ.ಪಿ ಬಸ್ಸಿನ ಚಾಲಕರಾಗಿದ್ದು ದಿನಾಂಕ 05.12.2023 ರಂದು ಸಮಯ 11.45 ಗಂಟೆಗೆ ಸುಳ್ಯ ತಾಲೂಕು ಸುಳ್ಯ ಕಸಬಾ ಹಳೆಗೇಟು ಬಳಿ ಇರುವ ಶ್ರೀ ವೆಂಕಟರಮಣ ಸೊಸೈಟಿ ಎದುರು ಹಾದುಹೋಗುವ ಮಾಣಿ- ಮೈಸೂರು ಹೆದ್ದಾರಿ ರಸ್ತೆಯಲ್ಲಿ ಕೆಎ 19 ಎಫ್ 3484 ನಂಬ್ರದ ಕೆಎಸ್ಆರ್ ಟಿಸಿ ರಾಜಹಂಸ ಬಸ್ಸನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ತನ್ನ ಮುಂದೆ ಹೋಗುತ್ತಿದ್ದ ಇನ್ನೊಂದು ರಾಜಹಂಸ ಬಸ್ಸನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿ ಎದುರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಮೋಟಾರ್ ಸೈಕಲ್ ನಂಬ್ರ ಕೆಎ 21 ಎಸ್ 7723ಕ್ಕೆ ಡಿಕ್ಕಿ ಹೊಡೆದ ಪರಿಣಾಮ
ಮೋಟಾರ್ ಸೈಕಲ್ ಸವಾರ ರಸ್ತೆಗೆ ಬಿದ್ದು ಎಡ ಕಣ್ಣಿನ ಬಳಿ ಹಾಗೂ ಬಲಕಾಲಿನ ಮೊಣಗಂಟಿಗೆ ಸಾಮಾನ್ಯ ಸ್ವರೂಪದ ಗಾಯ, ಮುಖಕ್ಕೆ ಹಾಗೂ ಬಲಕೋಲು ಕಾಲಿಗೆ ತೀವ್ರ ಸ್ವರೂಪದ ಎಲುಬು ಮುರಿತ ಗಾಯವುಂಟಾಗಲು ಕಾರಣದ ಅಪರಾಧ ಎಸಗಿರುವುದಾಗಿದೆ.















ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಬಿ. ಮೋಹನ್ ಬಾಬು ರವರ ಮುಂದೆ ಈ ಪ್ರಕರಣದ ವಿಚಾರಣೆ ನಡೆದು ಆರೋಪಿಯನ್ನು ಫೆ.19, 2025 ರಂದು ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಕೆಳಕಂಡಂತೆ ಪ್ರಕಟಿಸಿರುತ್ತಾರೆ.
ಕಲಂ 279 ರಡಿಯಲ್ಲಿನ ಅಪರಾಧಕ್ಕಾಗಿ
ಮೂರು ತಿಂಗಳ ಸಾದಾ ಕಾರಾಗೃಹ ವಾಸ ಮತ್ತು ₹1,000/- ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ತಿಂಗಳ ಹೆಚ್ಚುವರಿ ಸಾದಾಕಾರಾಗೃಹ ಶಿಕ್ಷೆ, ಕಲಂ 337 ರಡಿಯಲ್ಲಿನ ಅಪರಾಧಕ್ಕೆ ಮೂರು ತಿಂಗಳ ಸಾದಾ ಕಾರಾಗೃಹ ವಾಸ ಮತ್ತು ₹500 ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ತಿಂಗಳುಗಳ ಕಾಲ ಹೆಚ್ಚುವರಿ ಸಾದಾ ಕಾರಾಗೃಹ ಶಿಕ್ಷೆ, ಕಲಂ 338 ರಡಿಯಲ್ಲಿನ ಅಪರಾಧಕ್ಕಾಗಿ ಆರು ತಿಂಗಳುಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ₹1000 ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಎರಡು ತಿಂಗಳ ಕಾಲ ಹೆಚ್ಚುವರಿ ಸಾದಾ ಕಾರಾಗೃಹ ಶಿಕ್ಷೆ .
ಮೇಲಿನ ಅಪರಾಧಗಳಿಗೆ ವಿಧಿಸಲಾದ ಶಿಕ್ಷೆಯನ್ನು ಏಕಕಾಲಕ್ಕೆ ಜಾರಿಗೊಳಿಸತಕ್ಕದ್ದು ಎಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ
ಸರ್ಕಾರದ ಪರವಾಗಿ ಪ್ರಕರಣವನ್ನು ಸಹಾಯಕ ಸರ್ಕಾರಿ ಅಭಿಯೋಜಕರು ನಡೆಸಿ ವಾದ ಮಂಡಿಸಿರುತ್ತಾರೆ










