ಸುದ್ದಿ ಬಿಡುಗಡೆ ಜಿಲ್ಲಾ ವರದಿಗಾರ ಭಾಸ್ಕರ ರೈಯರಿಗೆ ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ

0

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸುದ್ದಿ ಬಿಡುಗಡೆ ಪತ್ರಿಕೆಯ ದ.ಕ. ಜಿಲ್ಲಾ ವರದಿಗಾರ ಭಾಸ್ಕರ ರೈ ಕಟ್ಟ ಇವರಿಗೆ ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ ಸಂದಿದೆ.ಭಾಸ್ಕರ ರೈಯವರು ಹಲವು ದಶಕದಿಂದ ಪತ್ರಕಾ ರಂಗದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಮಾ. ೯ರಂದು ಕೊಪ್ಪಳದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ತಿಳಿಸಿದ್ದಾರೆ.