ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ

0

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾ. ೦8 ರಂದುCICC/Anti- Sexual Harasment Cell (ಕಾಲೇಜು ಆಂತರಿಕ ದೂರು ಸಮಿತಿ) ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಡಾ. ಶೈಲಾ ಎಂ. ಪೈ, ಉಪಪ್ರಾಂಶುಪಾಲೆ, ಮುಖ್ಯಸ್ಥರು, Oral Pathology & Microbiology,, ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ, ಕುರುಂಜಿಭಾಗ್, ಸುಳ್ಯ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ಮಹಿಳಾ ಸಬಲೀಕರಣ ಹಾಗೂ ಮಹಿಳೆಯರು ಸ್ವತಂತ್ರವಾಗಿ ಬದುಕುವ ಕಲೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿಕೊಳ್ಳಬೇಕು ಅಲ್ಲದೆ ವಿದ್ಯಾರ್ಥಿನಿಯರಿಗೆ ಹಣದ ಹೂಡಿಕೆ ಹಾಗೂ ಸರಕಾರದಿಂದ ಹೆಣ್ಣುಮಕ್ಕಳಿಗೆ ಕೊಡಮಾಡುವ ವಿವಿಧ ಸೌಲಭ್ಯವನ್ನು ಬಳಸಿಕೊಳ್ಳಬೆಕು ಎಂದು ಮಹಿಳಾ ದಿನಾಚರಣೆಯ ಬಗ್ಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಇನ್ನರ್‌ವ್ಹೀಲ್ ಕ್ಲಬ್ ಸುಳ್ಯ ಇದರ ಅಧ್ಯಕ್ಷರು ಶ್ರೀಮತಿ ಚಿಂತನಾ ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ನೆಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಿಳೆಯರು ದೇಶದ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಹೇಳಿ ಶುಭ ಹಾರೈಸಿದರು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಯವರು ಮಾತನಾಡಿ ಮಹಿಳೆಯರು ಸಶಕ್ತರಾಗಬೇಕು. ಪುರಾಣದಿಂದಲೇ ಇಡೀ ಜಗತ್ತು ತಾಯಿಯಿಂದಲೇ ಪ್ರಗತಿಯಾಗಿದೆ ಅದೇ ರೀತಿ ಮುಂದೆಯೂ ಮಹಿಳೆಯಾದವಳು ಆತ್ಮ ವಿಶ್ವಾಸ ಧೈರ್ಯ ಹಾಗೂ ತಾಳ್ಮೆಯಿಂದ ಇಡೀ ಜಗತ್ತನ್ನು ಅಭಿವೃದ್ಧಿಯತ್ತ ಕೊಂಡುಯ್ಯುವಲ್ಲಿ ಅವಳ ಸಹಭಾಗಿತ್ವ ಪ್ರಮುಖವಾದದ್ದು ಎಂದು ಹೇಳಿ ಮಹಿಳಾ ದಿನಾಚರಣೆಯ ಶುಭಾಶಯಗಳನ್ನಿತ್ತರು.

ಕಾರ್ಯಕ್ರಮಕ್ಕೆ ಯಶಸ್ಸನ್ನು ಹಾರೈಸುತ್ತಾ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಯವರು ಮಾತನಾಡಿ ಎಲ್ಲರಿಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಮಹಿಳಾ ದಿನಾಚರಣೆಯ ಅಂಗವಾಗಿ ನಮ್ಮ ಕಾಲೇಜಿನ ಬೋದಕ ಸಿಬ್ಬಂದಿಗಳ ವಿಭಾಗದಿಂದ ಡಾ. ಸವಿತಾ ಎಂ., ಪ್ರೊಫೆಸರ್ ಇಲೆಕ್ಟ್ರಾನಿಕ್ಸ್ & ಇಂಜಿನಿಯರಿಂಗ್ ವಿಭಾಗ ಮತ್ತು ಬೋದಕೇತರ ಸಿಬ್ಬಂದಿಗಳ ವಿಭಾಗದಿಂದ ಶ್ರೀಮತಿ ದಮಯಂತಿ ಕೆ ಅವರನ್ನು ಸನ್ಮಾನಿಸಲಾಯಿತು. ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಬೋಧಕೇತರ ಸಿಬ್ಬಂದಿಯಾದ ಶ್ರೀಮತಿ ಪ್ರಮಿಳಾ ಟಿ ಅವರಿಗೆ ಅವರ ಆರ್ಥಿಕ ಪರಿಸ್ಥಿತಿಯ ನಿರ್ವಹಣೆಗೆ ಕಾಲೇಜಿನ ಸಿಬ್ಬಂಧಿವರ್ಗದವರ ವತಿಯಿಂದ ರೂ. ೮೦,೦೦೦/- ಸಹಾಯಧನವನ್ನು ವಿತರಿಸಲಾಯಿತು. ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರು ಡಾ. ಸುರೇಖಾ ಎಂ. ಅತಿಥಿಗಳನ್ನು ಪರಿಚಯಿಸಿದರು. ಅತಿಥಿಗಳನ್ನು ಹಾಗೂ ಸಭಾ ಸದರನ್ನು ಸಿ.ಐ.ಸಿ.ಸಿ. ಅಧ್ಯಕ್ಷರಾದ ಡಾ. ಭಾಗ್ಯ ಹೆಚ್.ಕೆ. ಸ್ವಾಗತಿಸಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಡಾ. ದಿವ್ಯ ಎ.ಕೆ. ಧನ್ಯವಾದ ಸಮರ್ಪಿಸಿದರು.

ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿಯರಾದ ತೃಷಾಲಿ ಮತ್ತು ಮನಸ್ವಿ ಕೆ ಕಾರ್ಯಕ್ರಮ ನಿರೂಪಿಸಿದರು. ಪೂಜಾ ಮತ್ತು ಖುಷಿ ಪ್ರಾರ್ಥಿಸಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿಸಿತರಿದ್ದರು.