Home Uncategorized ಅರಂತೋಡು- ತೊಡಿಕಾನ – ಪಟ್ಟಿ- ಭಾಗಮoಡಲ ರಸ್ತೆ ಅಭಿವೃದ್ಧಿ ಕುರಿತು ಶಾಸಕಧ್ವಯರಿಂದ ಅರಣ್ಯ ಸಚಿವರ ಭೇಟಿ

ಅರಂತೋಡು- ತೊಡಿಕಾನ – ಪಟ್ಟಿ- ಭಾಗಮoಡಲ ರಸ್ತೆ ಅಭಿವೃದ್ಧಿ ಕುರಿತು ಶಾಸಕಧ್ವಯರಿಂದ ಅರಣ್ಯ ಸಚಿವರ ಭೇಟಿ

0

ರಸ್ತೆ ಅಭಿವೃದ್ಧಿಯ ತೊಡಕುಗಳ ಬಗ್ಗೆ ಸಚಿವರಿಗೆ ಮನಮುಟ್ಟಿಸಿದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಎ.ಎಸ್ ಪೊನ್ನಣ್ಣ

ಅರಂತೋಡು – ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕುರಿತಾಗಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಮತ್ತು ವಿರಾಜಪೇಟೆ ಶಾಸಕರು ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರಾದ ಎ .ಎಸ್ ಪೊನ್ನಣ್ಣ ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ರಸ್ತೆಯ ಅಭಿವೃದ್ಧಿಯ ಅಗತ್ಯತೆಯನ್ನು ಮನವರಿಕೆ ಮಾಡಿ ಉಂಟಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಲು ಮನವಿಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ರಸ್ತೆ ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ಆರಂತೋಡು-ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಮನು ಪೆರುಮುಂಡ, ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಆರಂತೋಡು-ತೊಡಿಕಾನ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಹಣಾ ಅಧಿಕಾರಿ ವಾಸುದೇವ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

NO COMMENTS

error: Content is protected !!
Breaking