ಕರಾವಳಿಯಲ್ಲಿ ಸುಡುಬಿಸಿಲು- ಸುಳ್ಯದಲ್ಲಿ ಗರಿಷ್ಠ ತಾಪಮಾನ

0

ಬಿಸಿಗಾಳಿ:ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ

ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು ಬಿಸಿಗಾಳಿ(ಹೀಟ್ ವೇವ್) ಎಚ್ಚರಿಕೆಯನ್ನು ನೀಡಲಾಗಿದೆ.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಇದು ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್(ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

ಜನತೆ ತತ್ತರ: ಸುಡುಬಿಸಿಲಿನಿಂದಾಗಿ ಜನತೆ ತತ್ತರಿಸಿದ್ದಾರೆ.ಈಗಾಗಲೇ ಹಲವರು ಅನಾರೋಗ್ಯಕ್ಕೊಳಗಾಗಿದ್ದಾರೆ.
ಮತ್ತೊಂದೆಡೆ ಉರಿಬಿಸಿಲಿನಿಂದಾಗಿ ಕೃಷಿಗೂ ಹಾನಿಯಾಗಿದೆ.ವಿವಿಧ ಕಡೆಗಳಲ್ಲಿ ಸರಕಾರಿ,ಖಾಸಗಿ ಜಮೀನುಗಳಲ್ಲಿ ಬೆಂಕಿ ಹೊತ್ತಿ ಉರಿದಿದೆ.ಒಟ್ಟಾರೆ ವರ್ಷ ಹೋದಂತೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಆತಂಕಿತರಾಗಿದ್ದಾರೆ.ಮಾರ್ಚ್ ಎರಡನೇ ವಾರವೇ ಹೀಗಾದರೆ ಮುಂದೆ ಏಪ್ರಿಲ್, ಮೇ ತಿಂಗಳಲ್ಲಿ ಪರಿಸ್ಥಿತಿ ಹೇಗಿರಬಹುದು ಎಂದು ಜನತೆ ಚಿಂತಾಕ್ರಾಂತರಾಗಿದ್ದಾರೆ.

ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು ಬಿಸಿಗಾಳಿ(ಹೀಟ್ ವೇವ್) ಎಚ್ಚರಿಕೆಯನ್ನು ನೀಡಲಾಗಿದೆ.ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ೪೧ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಮುಂದಿನ ಎರಡು ದಿನ ಇದು ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್(ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

ಬಿಸಿಗಾಳಿ/ಹೀಟ್ ವೇವ್‌ಗೆ ಸಲಹೆಗಳು


ವಿಶೇಷವಾಗಿ ಮಧ್ಯಾಹ್ನ 12ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದು,ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಕುಡಿಯದಂತೆ, ಹೆಚ್ಚಿನ ಪ್ರೊಟೀನ್ ಹೊಂದಿರುವ ಆಹಾರವನ್ನು ಸೇವಿಸಬೇಕು.
ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ.ನಿಮಗೆ ಮೂರ್ಚೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.
ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಎಳನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.ದೇಹವನ್ನು ಮರು-ಜಲೀಕರಣ ಮಾಡಲು ಸಹಾಯ ಮಾಡುತ್ತದೆ.ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು.ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.ರೈತರು/ಕೃಷಿ ಕಾರ್ಮಿಕರು ಹೊಲದಲ್ಲಿ ಕೆಲಸ ಮಾಡುವಾಗ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.ಸಾಧ್ಯವಾದಷ್ಟು ವಾಹನಗಳಿಗೆ ಪುಲ್ ಟ್ಯಾಂಕ್ ಇಂಧನವನ್ನು ಹಾಕಿಸಬೇಡಿ ಹಾಗೂ ನೆರಳಿನಲ್ಲಿ ನಿಲ್ಲಿಸಬೇಕು ಎಂದೂ ಸಲಹೆ ನೀಡಲಾಗಿದೆ.

ಸನ್‌ಸ್ಟೋಕ್ ಪೀಡಿತ ವ್ಯಕ್ತಿಯ ಚಿಕಿತ್ಸೆಗಾಗಿ ಸಲಹೆಗಳು

ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ.ಆಗಾಗ ದೇಹವನ್ನು ತೊಳೆಯಿರಿ,ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ.ದೇಹದ ಉಷ್ಣತೆಯನ್ನು ಕಡಿಮೆ ಮಾಡಬೇಕಾಗಿದೆ.ವ್ಯಕ್ತಿಯನ್ನು ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕಾಗುತ್ತದೆ.ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ಕರಾವಳಿ ಕರ್ನಾಟಕದ ಬಿಸಿ ಗಾಳಿಗೆ ಸಲಹೆ


ಬಿಸಿಲಿನಲ್ಲಿ ತಲೆ ಹಾಗೂ ದೇಹವನ್ನು ಸೂರ್ಯನ ಕಿರಣಗಳಿಗೆ ಒಡ್ಡದಿರಿ.ಹೊರಗೆ ಬಿಸಿಲಿನಿಂದ ಮನೆಗೆ ಬಂದ ತಕ್ಷಣ ಕೂಡಲೇ ಅತೀ ತಂಪಾದ ನೀರು ಕುಡಿಯಬಾರದು ಅಥವಾ ಎ.ಸಿ/ಕೂಲರ್‌ಗಳನ್ನು ಕೂಡಲೇ ಬಳಸಬಾರದು ಎಂದು ಸಲಹೆ ನೀಡಲಾಗಿದೆ.
ಅನುಸರಿಸಬೇಕಾದ ಕ್ರಮಗಳು: ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿರಿ.ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ.ವಾಸವಿರುವ ಕೋಣೆಯನ್ನು ತಂಪಾಗಿರಿಸಿ, ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ,ಕೂಡಲೇ ಚಿಕಿತ್ಸೆ ಕೊಡಿಸಿ.ಬಿಸಿಗಾಳಿಗೆ ತುತ್ತಾದವರಿಗೆ ಸಾಕಷ್ಟು ನೀರು, ಮಜ್ಜಿಗೆ, ದ್ರವ ರೂಪದ ಆಹಾರ ನೀಡಬೇಕು.
ಅನುಸರಿಸಬಾರದ ಕ್ರಮಗಳು: ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ.ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ,ಕಪ್ಪು/ಗಾಢ ಬಣ್ಣದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ.ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ.ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ.ಬಿಸಿ ಚಹ, ಕರಿದ ಪದಾರ್ಥ, ಮದ್ಯ ಸೇವಿಸಬೇಡಿ.ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ.ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೇನು ಸೇವಿಸಬಾರದು ಎಂದು ದ.ಕ ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.