ಚೊಕ್ಕಾಡಿ ಮಯೂರಿ ಯುವತಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯನ್ನು ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವತಿ ಮಂಡಲದ ಅಧ್ಯಕ್ಷೆಯಾದ ಶ್ರೀಮತಿ ಹೇಮಾವತಿ ತಂಟೆಪ್ಪಾಡಿ ಯವರು ವಹಿಸಿದ್ದರು.

ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಮರ್ಪಣಾ ಚಾರಿಟೇಬಲ್ ಇದರ ಕಾರ್ಯದರ್ಶಿಯಾದ ಶ್ರೀಮತಿ ಪಾರ್ವತಿ ನೇಣಾರುರವರು ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮ ದಲ್ಲಿ ಸನ್ನಿದಿ ಪೂಜಾರಿಮನೆ ಪ್ರಾರ್ಥಿಸಿ, ಮಧುಶ್ರೀ ಕೇನಡ್ಕ ನಿರೂಪಿಸಿದರು .
ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆ ಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮಯೂರಿ ಯುವತಿ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಎಲ್ಲರಿಗೂ ಸಿಹಿ ತಿಂಡಿಯನ್ನು ನೀಡಲಾಯಿತು.