
ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಮಠದಲ್ಲಿ ಮಾ.13 ರಂದು ನೆರವೇರಿತು. ಮಠದ ಅರ್ಚಕ ಶ್ರೀ ಹರಿ ಎಳಚಿತ್ತಾಯ ರವರು ಪ್ರಾರ್ಥನೆ ನೆರವೇರಿಸಿದರು.
ಮಠದ ಬೃಂದಾವನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿಯವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಠದ ಟ್ರಸ್ಟಿನ ವರು ಹಾಗೂ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.