








ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಕಾರದೊಂದಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ. 15 ರಂದು ಸಹಕಾರ ಸಂಘದ ಜಾಲ್ಸೂರು ಶಾಖಾ ವಠಾರದಲ್ಲಿ ನಡೆಯಿತು.

ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಕಾಮತ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಹಿತ್ಕುಮಾರ್ ಕುದ್ಕುಳಿ, ಸಹಕಾರಿ ಸಂಘದ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಸುಮಾರು ೮೦ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.










