Home Uncategorized ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಬ್ರಹ್ಮಕಲಶೋತ್ಸವ...

ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

0

ದೈವಸ್ಥಾನಗಳ ಜೀರ್ಣೋದ್ಧಾರದಿಂದ ನೆಮ್ಮದಿಯ ಬದುಕು : ಭಾಗೀರಥಿ ಮುರುಳ್ಯ

”ನಾವು ನಂಬಿಕೊಂಡು ಬರುವ ಮಂದಿರಗಳು, ದೈವಸ್ಥಾನಗಳನ್ನು ಕಾಲ ಕಾಲಕ್ಕೆ ಜೀರ್ಣೋದ್ಧಾರಗೊಳಿಸಿದಾಗ ನಮ್ಮ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ, ಕುಪ್ಪೆ ಪಂಜುರ್ಜಿ ಮತ್ತು ಗುಳಿಗ ಸಾನಿಧ್ಯ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸತ್ಯ,ನ್ಯಾಯ ಧರ್ಮದ ನೆಲೆಯಲ್ಲಿ ನಾವು ನಡೆದುಕೊಳ್ಳಬೇಕು. ಆಗ ದೇವರು ಕೂಡಾ ನಮ್ಮ ಇಷ್ಟಾರ್ಥವನ್ನು ಈಡೇರಿಸುತ್ತಾನೆ. ನಮ್ಮ ನಂಬಿಕೆ, ಸಂಪ್ರದಾಯವನ್ನು ಮರೆಯದೇ ಆಚಾರ – ವಿಚಾರಗಳನ್ನು ಮುಂದಿನ ಪೀಳಿಗೆಗೂ ತಿಳಿಸುವ ಕಾರ್ಯ ಆಗಬೇಕು” ಎಂದ ಶಾಸಕರು ಈ ಭಾಗದ ಜನರ ಕೋರಿಕೆಯಂತೆ ಇಲ್ಲಿಗೆ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್ ಕೊರೆಸಲು ಅನುದಾನ ನೀಡುವುದಾಗಿ ಅವರು ಹೇಳಿದರು.


ಕರ್ಲಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಧಾರ್ಮಿಕ ಉಪನ್ಯಾಸ ನೀಡಿ, “ನಿಷ್ಕಲ್ಮಶ ಭಕ್ತಿಗೆ ದೇವರ ಒಲಿಯುತ್ತಾನೆ. ಈ ಸಮಾಜದಲ್ಲಿ ಧರ್ಮದ ಪರವಾಗಿ ಅನ್ಯಾಯದ ವಿರುದ್ಧ ಹೋರಾಟ ಮಾಡುವವರು ನಾವು ದೇವರಂತೆ ಕಾಣುತ್ತೇವೆ. ಅದು ತುಳು ನಾಡಿನ ವಿಶೇಷ ಗುಣ” ಎಂದು ಹೇಳಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡು ರಾಧಾಕೃಷ್ಣ ರೈ ಸಭಾಧ್ಯಕ್ಷತೆ ವಹಿಸಿದ್ದರು.


ಸುಳ್ಯ ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ಶ್ರೀ ಶಾರದಾಂಬಾ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಸುಳ್ಯ ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಪಂಗಾಯ, ಸುಳ್ಯ ನಗರ ಸದಸ್ಯರುಗಳಾದ ರಿಯಾಜ್ ಕಟ್ಟೆಕಾರ್, ವಿನಯ ಕುಮಾರ್ ಕಂದಡ್ಕ, ಶಿಲ್ಪಾ ಸುದೇವ್, ಸುಧಾಕರ ಕುರುಂಜಿಭಾಗ್, ಧರ್ಮಸ್ಥಳ ಕ್ಷೇತ್ರದ ಸುಳ್ಯ ಯೋಜನಾಧಿಕಾರಿ ಮಾಧವ ಗೌಡ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಗಣೇಶ್ ಪ್ರಸಾದ್, ನ್ಯಾಯವಾದಿ ಹರೀಶ್ ಬೂಡುಪನ್ನೆ, ಆದಿದ್ರಾವಿಡ ಯುವ ವೇದಿಕೆಯ ದ.ಕ.ಜಿಲ್ಲಾ ಅಧ್ಯಕ್ಷ ಸುಂದರ ಅಡ್ಪಂಗಾಯ, ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಚಂದ್ರಶೇಖರ ಕೇರ್ಪಳ, ದೈವಸ್ಥಾನದ ಆಡಳಿತ ಮೊಕ್ತೇಸರ ಮಾಯಿಲ ಬೂಡು, ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು ಅತಿಥಿಗಳಾಗಿದ್ದರು.

ಚೈತ್ರಾ, ತೃಪ್ತಿ ಬಳಗ ಪ್ರಾರ್ಥಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಸ್ವಾಗತಿಸಿದರು. ರಮೇಶ್ ಬೂಡು ಪ್ರಾಸ್ತಾವಿಕ ಮಾತನಾಡಿದರು.
ಸುದ್ದಿ ಬಿಡುಗಡೆ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

NO COMMENTS

error: Content is protected !!
Breaking