















ಸುಳ್ಯ- 60, ಸುದ್ದಿ 40 ಕಾರ್ಯಕ್ರಮದ ಪೂರ್ವಭಾವಿಯಾಗಿ ನಮ್ಮ ಗ್ರಾಮ ನಮ್ಮ ಹೆಮ್ಮೆ ಅರಂತೋಡು ಗ್ರಾಮ ಸಮಿತಿ ರಚನಾ ಸಭೆ ಇಂದು ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಉಪಾಧ್ಯಕ್ಷೆ ಭವಾನಿ ಚೆಟ್ಟನ್ನೂರು,
ಗ್ರಾ.ಪಂ.ಸದಸ್ಯರು, ಗಣ್ಯರು ,ಸುದ್ದಿ ಹಿತೈಷಿಗಳು ಉಪಸ್ಥಿತರಿದ್ದರು.

ಸುದ್ದಿ ಮಾಹಿತಿ ವಿಭಾಗದ ಮುಖ್ಯಸ್ಥ ಕೃಷ್ಣ ಬೆಟ್ಟ ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು.ಅಶ್ರಫ್ ಗುಂಡಿ ವಂದಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಸಮಿತಿಯನ್ನು ರಚಿಸಲಾಯಿತು.










