ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ರಾಜ್ಯ ಮಟ್ಟದ ಅಂಚೆ ಕಾರ್ಡು ಚುಟುಕು ಕವಿಗೋಷ್ಠಿ ಸ್ಪರ್ಧೆಯಲ್ಲಿ ಪೂರ್ಣಿಮಾ ಕಾರಿಂಜ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಇವರಿಗೆ ಚುಟುಕು ಯೋಗಾಚಾರ್ಯ ಡಾ. ಎಂ.ಜಿ.ಆರ್. ಅರಸು ಚುಟುಕು ಕಾವ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿನೋಬ ನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿಯಾಗಿರುವ ಇವರು ಅದೇ ಶಾಲೆಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯರಾದ ಜಯಪ್ರಸಾದ್ ಕಾರಿಂಜ ಅವರ ಪತ್ನಿ ಹಾಗೂ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಮತ್ತು ಶ್ರೀಮತಿ ವೇದಾವತಿ ಮುಗುಪ್ಪುರವರ ಪುತ್ರಿ.
Home Uncategorized ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ – ರಾಜ್ಯಮಟ್ಟದ ಅಂಚೆ ಕಾರ್ಡ್ ಚುಟುಕು ಸ್ಪರ್ಧೆಯಲ್ಲಿ ಪೂರ್ಣಿಮಾ...