ಎ.9ರಂದು ನಿವೃತ್ತ ದೈ.ಶಿಕ್ಷಣ ಶಿಕ್ಷಕ ನಟರಾಜ್ ಎಂ.ಎಸ್.ರಿಗೆ ಸಾರ್ವಜನಿಕ ಅಭಿನಂದನೆ : ಪೂರ್ವಭಾವಿ ಸಭೆ

0

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 30 ವರ್ಷಗಳ‌ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ.31ರಂದು‌ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರಾದ ನಟರಾಜ್ ಎಂ.ಎಸ್.ರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಎ.9ರಂದು ನಡೆಯಲಿದ್ದು ಪೂರ್ವಭಾವಿ ಸಭೆಯು ಎ.3ರಂದು ನಡೆಯಿತು.

ಅಭಿನಂದನಾ ಸಮಿತಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಎ.9ರಂದು ಅಪರಾಹ್ನ 3 ಗಂಟೆಗೆ ಸಭೆ ನಡೆಸುವ ಕುರಿತು ಚರ್ಚಿಸಲಾಗಿದೆ ನಿರ್ಣಯ ಕೈಗೊಳ್ಳಲಾಯಿತು.

ನಟರಾಜ ಎಂ.ಎಸ್. ದಂಪತಿಗಳನ್ನು ಸಾರ್ವಜನಿಕವಾಗಿ ಅಭಿನಂದಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ಗಣ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪೂರ್ವಭಾವಿ ಸಭೆಯಲ್ಲಿ ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿ, ನಗರ ಯೋಜನ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಹಿರಿಯರಾದ ಬಾಪೂ ಸಾಹೇಬ್ ಅರಂಬೂರು, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್ ಕೊಡೆಂಕಿರಿ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ. ಯವರು ಸಭೆಯಲ್ಲಿ ಭಾಗವಹಿಸಿದ್ದರು.

ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಪ್ರಾಸ್ತಾವಿಕ ಮಾತನಾಡಿ, ಹಿರಿಯ ಶಿಕ್ಷಕ ಡಾ.ಸುಂದರ ಕೇನಾಜೆ ಕಾರ್ಯಕ್ರಮ ನಿರ್ವಹಿಸಿದರು.