
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ ಅಗ್ನಿಶಾಮಕ ಠಾಣೆ ಸುಳ್ಯ ಇವರಿಂದ ಅಗ್ನಿ ಶಮನ ಮತ್ತು ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಾರ್ಯಾಗಾರ ಏ.1ರಂದು ನಡೆಯಿತು.









ಅಗ್ನಿ ಶಮನದ ವಿಧಗಳು, ಅಗ್ನಿಯಿಂದ ಆಗಬಹುದಾದ ಅಪಾಯಗಳು ಇದಕ್ಕೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಪ್ರವಾಹ ಸಂದರ್ಭದಲ್ಲಿ, ರಜಾ ಸಮಯದಲ್ಲಿ ಮಕ್ಕಳು ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಅಗ್ನಿ ಶಾಮಕ ಠಾಣಾಧಿಕಾರಿ ಸೋಮನಾಥ ಬಿ ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜೇಶ್ ಬಿ.ಕೆ. ಇವರು ಮಾಹಿತಿ ನೀಡಿದರು. ತದನಂತರ ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಗ್ರಾಮಾಭಿವೃದ್ಧಿ ಅಧಿಕಾರಿಗಳಾದ ಚೆನ್ನಪ್ಪ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಹಳೆವಿದ್ಯಾರ್ಥಿಗಳು ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಪುಟಾಣಿ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಊರ ಬಂಧುಗಳು ಉಪಸ್ಥಿತರಿದ್ದರು.










