
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಸುಳ್ಯದ ಬಂಟರ ಭವನದಲ್ಲಿ ನಡೆಯುತ್ತಿದ್ದು, ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು.









ಬೆಳಗ್ಗೆ ಸುಳ್ಯಜ್ಯೋತಿ ಸರ್ಕಲ್ ಬಳಿಯಿಂದ ಮೆರವಣಿಗೆ ಆರಂಭವಾಯಿತು.
ಅಂಬೇಡ್ಕರ್ ರವರ ಪ್ರತಿಮೆಯನ್ನು ತೆರೆದ ವಾಹನದಲ್ಲಿ ಇಟ್ಟು ಮೆರವಣಿಗೆ ಸಾಗಿತು.

ಶಾಸಕಿ ಭಾಗೀರಥಿ ಮುರುಳ್ಯ ಮೆರವಣಿಗೆಗೆ ಚಾಲನೆ ನೀಡಿದರು.
ಇಲಾಖಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಮೆರವಣಿಗೆಗಲ್ಲಿ ಸಾಗಿದರು.











