ಕಲ್ಲುಗುಂಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0

ಕಲ್ಲುಗುಂಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತಿದ್ದ ವ್ಯಕ್ತಿಯೊಬ್ಬರು ಏ. 14 ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರ ಸಂಭಂದಿಕರು ಕೂಡಲೇ ಅವರನ್ನು ಸುಳ್ಳದ ಕೆವಿಜಿ ಆಸ್ಪತ್ರೆಗೆ ಕರೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಏ 18 ರಂದು ಅವರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ವ್ಯಕ್ತಿ ಧರ್ಮರಾಜ್ (45 ವರ್ಷ) ಎಂದು ತಿಳಿದುಬಂದಿದೆ. ಇವರು ಕಲ್ಲುಗುಂಡಿ ಭಾಗದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕ್ಕೊಂಡು ಬಾಡಿಗೆ ಮನೆಯಲ್ಲಿ ವಾಸ ವಾಗಿದ್ದರು.

ಕೌಟುಂಬಿಕ ಕಲಹ ಹಿನ್ನಲೆ ಯಲ್ಲಿ ಕಳೆದ 20 ವರ್ಷಗಳಿಂದ ಇವರ ಪತ್ನಿ ಇಬ್ಬರು ಮಕ್ಕಳೊಂದಿಗೆ ಬೇರೆಡೆ ಇದ್ದರು, ಇದರಿಂದ ಮನನೊಂದು ಈ ಕೃತ್ಯವನ್ನು ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.