














ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ 35 ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿ ಅಗಲಿದ ಮರ್ ಹೂಮ್ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ 6 ನೇ ವರ್ಷದ ಅನುಸ್ಮರಣೆ ಹಾಗೂ 21 ನೇ ವಾರ್ಷಿಕ ದಿಕ್ರ್ ಸ್ವಲಾತ್ ಮಜಿಲಿಸ್ ಕಾರ್ಯಕ್ರಮವು ದಿನಾಂಕ 24.04.2025 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಯಲ್ಲಿ ದಿಕ್ರ್ ಸ್ವಲಾತ್ ಸಮಿತಿಯ ಗೌರವಾಧ್ಯಕ್ಷರಾದ ಶೈಖುನಾ ಅಲ್ ಹಾಜ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಙಳ್ ದುಗಲಡ್ಕರವರ ನೇತೃತ್ವದಲ್ಲಿ ನಡೆಯಲಿದೆ. ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ ಅನುಸ್ಮರಣಾ ಭಾಷಣವನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಲಾಯಿಲ್ ಫೈಝಿ ಗಟ್ಟಮನೆ ಮಾಡಲಿದ್ದಾರೆ. ಸಮಾರಂಭದಲ್ಲಿ ಅನೇಕ ಉಲಮಾ ಉಮಾರಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆಂದು ಅರಂತೋಡು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ತಿಳಿಸಿದ್ದಾರೆ.










