ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನವೋದಯ ಸ್ವ. ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮನವೋದಯ ಟ್ರಸ್ಟ್ ನ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ನವೋದಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ನೀಡಿದ್ದು ಎ.21 ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ವಿತರಣಾ ಕಾರ್ಯಕ್ರಮ ನಡೆಯಿತು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ,ಉಪಾಧ್ಯಕ್ಷ ಸದಾನಂದ ಕಾರ್ಜ, ದಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಪಂಜ ಶಾಖೆಯ ವ್ಯವಸ್ಥಾಪಕರಾದ ರೇಖಾ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ , ದ. ಕ ಕೇಂದ್ರ ಸಹಕಾರಿ ಬ್ಯಾಂಕಿನ ಸ್ವ ಸಹಾಯ ಗುಂಪುಗಳ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್ ತಾಲೂಕು ಮೇಲ್ವಿಚಾರಕ ಉಮೇಶ್ ಶೆಟ್ಟಿ. ಪ್ರೇರಕರಾದ ಹೇಮಂತ್. ಪಿ. ಕೆ. ಗಂಗಾಧರ ಇವರ ಉಪಸ್ಥಿಯಲ್ಲಿ ನಡೆಯಿತು. ನವೋದಯ ಸಂಘದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.