ಪರಿಸರದ ಸ್ವಚ್ಛತೆ ಕಾಪಾಡಿದ್ದಲ್ಲಿ ಭೂಮಿಯ ಸಂರಕ್ಷಣೆ ಸಾಧ್ಯ: ನ್ಯಾಯಾಧೀಶ ಬಿ ಮೋಹನ್ ಬಾಬು

ವಿಶ್ವ ಭೂ ದಿನದ ಪ್ರಯುಕ್ತ ಸುಳ್ಯ ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಏ.23 ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ ಮೋಹನ್ ಬಾಬು ಹಾಗೂ ಸಿವಿಲ್ ನ್ಯಾಯಾಧೀಶರಾದ ಅರ್ಪಿತಾ ರವರು ಗಿಡಕ್ಕೆ ನೀರು ಹಾಕುವ ಮೂಲಕ
ಉದ್ಘಾಟನೆಯನ್ನು ನೆರವೇರಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ ಮೋಹನ್ ಬಾಬು ರವರು ಮಾತನಾಡಿ ಪರಿಸರ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಬಳಕೆಯ ನಿಯಂತ್ರಣವನ್ನು ಮಾಡುವುದರಿಂದ ಭೂಮಿಯನ್ನು ಸಂರಕ್ಷಣೆ ಮಾಡಬಹುದು ಎಂದು ಪರಿಸರದ ಕಾಳಜಿ ಕುರಿತು ಜಾಗೃತಿ ಮೂಡಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
















ಸಂಪನ್ಮೂಲ ವ್ಯಕ್ತಿಗಳಾದ ಶ್ರೀ. ಜಗದೀಶ್ ಹುದೇರಿ ರವರು ವಾಯು ಮಾಲಿನ್ಯ, ಅರಣ್ಯ ನಾಶ ಹಾಗೂ
ಜಲ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹೆಚ್ಚು ಹೆಚ್ಚು ನಡೆಸಬೇಕು ಎಂದು ತಿಳಿಸಿದರು.

ಅರಣ್ಯ ಇಲಾಖೆಯ ವೀರೇಶ್ ಕೆ,ಸಹಾಯಕ ಸರ್ಕಾರಿ ಅಭಿಯೋಜಕರಾದ ರಮೇಶ್ ಆರ್, ವಕೀಲ ವೃಂದದವರು ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಮತ್ತು ಸಿವಿಲ್ ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಕೀಲರಾದ ಹರೀಶ್ ಬೂಡುಪನ್ನೆ ಸ್ವಾಗತಿಸಿ,ನಿರೂಪಿಸಿ ವಂದಿಸಿದರು.










