ಸುಳ್ಯ ಶಾಖೆ ಯೂನಿಯನ್ ಬ್ಯಾಂಕ್ ಇದರ ನೂತನ ವ್ಯವಸ್ಥಾಪಕರಾಗಿ ಗುರುಪ್ರಸಾದ್ ಬಿ.ಯವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.















ಇವರು ಮೂಲತಃ ಕಾಸರಗೋಡು ಜಿಲ್ಲೆ ಬೋವಿಕ್ಕಾನ ಮೂಲದವರಾಗಿದ್ದು ಕಳೆದ 13 ವರ್ಷಗಳಿಂದ ವಿವಿಧ ಭಾಗಗಳಲ್ಲಿ ಯೂನಿಯನ್ ಬ್ಯಾಂಕ್ ನ ಶಾಖೆಗಳಲ್ಲಿ ವ್ಯವಸ್ಥಾಪಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.
ಕಳೆದ ಎಂಟು ವರ್ಷಗಳ ಹಿಂದೆ ಇವರು ಸುಳ್ಯ ಕಾರ್ಪೊರೇಷನ್ ಬ್ಯಾಂಕಿನಲ್ಲಿ ವ್ಯವಸ್ಥಾಪಕರಾಗಿ ಸೇವೆಯನ್ನು ಸಲ್ಲಿಸಿ ಬೇರೆಡೆಗೆ ವರ್ಗಾವಣೆಗೊಂಡಿದ್ದರು.










