
ಜೇಸಿಐ ಪಂಜ ಪಂಚಶ್ರೀ ಪ್ರಾಂತ್ಯ ಎಫ್ ವಲಯ 15 ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರಮಟ್ಟದ ಈಜು ತರಬೇತುದಾರರಿಂದ ಈಜು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಎ. 26 ಏನೆಕಲ್ಲು ಹೊಳೆ ಮರಕತ ರಸ್ತೆ ಬಳಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಏ ಪಂಜ ಪಂಚಶ್ರೀ ಅಧ್ಯಕ್ಷ ಜೇಸಿ HGF ವಾಚಣ್ಣ ಕೆರೆಮೂಲೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ Member of Administrative committee JCI India PPP ವೈ.ಸುಕುಮಾರ್,
ಅತಿಥಿಯಾಗಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ
ವಿಶ್ರಾಂತ ದೈಹಿಕ ಶಿಕ್ಷಣ ನಿರ್ದೇಶಕ ಲl ತುಕಾರಾಂ ಏನೆಕಲ್ಲು , ವಲಯ 15 ರ
ಸ್ಕಾಲರ್ ಶಿಪ್ ಮತ್ತು ವಾಯ್ಸ್ ಆಫ್ ಯೂತ್ ವಲಯ ಸಂಯೋಜಕ
JFD ಲೋಕೇಶ್ ಆಕ್ರಿಕಟ್ಟೆ ಗೌರವ ಉಪಸ್ಥಿತರಿದ್ದರು .ರಾಷ್ಟ್ರೀಯ ಈಜು ತರಬೇತುದಾರ
ಯಶವಂತ ಬಿ. ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ಅಧ್ಯಕ್ಷ ಬಿ.ಕೆ.ಮಾಧವ, ಜೇಸಿಐ ಪಂಜ ಪಂಚಶ್ರೀ ಸ್ಥಾಪಕಾಧ್ಯಕ್ಷ JFM ದೇವಿ ಪ್ರಸಾದ್ ಜಾಕೆ, ಕಾರ್ಯದರ್ಶಿ ಜೇಸಿ ಅಶ್ವಥ್ ಬಾಬ್ಲುಬೆಟ್ಟು ಕಾರ್ಯಕ್ರಮ ನಿರ್ದೇಶಕರಾದ ಜೇಸಿ ಗಗನ್ ತೆಂಕಪಾಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜೇಸಿ ಶಿವಪ್ರಸಾದ್ ಹಾಲೆಮಜಲು ವೇದಿಕೆಗೆ
ಆಹ್ವಾನಿಸಿದರು.ಜೇಸಿ ಗಗನ್ ತೆಂಕಪಾಡಿ ಜೇಸಿವಾಣಿ ವಾಚಿಸಿದರು.








ಕಾರ್ಯದರ್ಶಿ ಜೇಸಿ ಅಶ್ವಥ್ ಬಾಬ್ಲುಬೆಟ್ಟು ವಂದಿಸಿದರು. ಕಾರ್ಯಕ್ರಮದಲ್ಲಿ ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರುಗಳು, ಸದಸ್ಯರುಗಳು, ಸ್ಕೌಟ್ಸ್ ಮತ್ತು ಗೈಡ್ಸ್ ನ ಪದಾಧಿಕಾರಿಗಳು, ಪೋಷಕರು, ಶಿಬಿರಾರ್ಥಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











