ಕ್ಷಣ ಮಾತ್ರದಲ್ಲಿ ವ್ಯಾಪಿಸಿದ ಬೆಂಕಿ,ಚಾಲಕ ಅಪಾಯದಿಂದ ಪಾರು
ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತಿದ್ದ ಲಾರಿಯೊಂದು ಹೊತ್ತಿ ಉರಿದ ಘಟನೆ ಕೊಯನಾಡು ಸಮೀಪ ಏ 29ರಂದು ಮುಂಜಾನೆ ನಡೆದಿದೆ.









ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ ಲಾರಿಗೆ ದಿಡೀರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು , ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ .
ಕಳೆದ ಎರಡು ತಿಂಗಳ ಮುಂಚೆ ಕೂಡಾ ಕೊಯನಾಡು, ಸಮೀಪ ಲಾರಿಯೊಂದು ಹೊತ್ತಿ ಉರಿದ ಘಟನೆ ಕೂಡಾ ವರದಿಯಾಗಿತ್ತು.










