ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಐವರ್ನಾಡು ಗ್ರಾಮ ಪಂಚಾಯತ್ ಇದರ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು
ಮೇ.5ರಂದು ಉದ್ಘಾಟನೆಗೊಂಡಿತು.









ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಇವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ಬೇಸಿಗೆ ಶಿಬಿರದಲ್ಲಿ ಮಕ್ಕಳ ಜ್ಞಾನ ವೃದ್ಧಿಯಾಗುವುದು. ಸಿಕ್ಕಿದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪಂಚಾಯತ್ ಅಧ್ಯಕ್ಷರು ಬೇಸಿಗೆ ಶಿಬಿರವನ್ನು ಇನ್ನು ಹೆಚ್ಚಿನ ಮಕ್ಕಳು ಪಡೆಯುವಂತಾಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಯಾಗಿದ್ದ ಸಂತೋಷ್ ಮುಂಡಕಜೆ ರವರು ಮಕ್ಕಳಿಗೆ ಯೋಗ ತರಬೇತಿಯನ್ನು ಹೇಳಿಕೊಟ್ಟರು.
20 ಮಂದಿ ಮಕ್ಕಳು ಶಿಬಿರದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ದೇವಿಪ್ರಸಾದ್ ಕೊಪ್ಪತ್ತಡ್ಕ, ಸುಜಾತ ಪವಿತ್ರ ಮಜಲು,ಸಿಬ್ಬಂದಿಗಳು ಹಾಗೂ ಗ್ರಂಥಾಲಯ ಮೇಲ್ವಿಚಾರಕರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಕು.ದೃತಿ ಪ್ರಾರ್ಥಿಸಿ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಲೀಲಾವತಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು








