ಬೆಳ್ಳಾರೆ- ಪೆರುವಾಜೆ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ 6 ರಂದು ಇಂಗ್ಲೀಷ್ ಲಿಟರರಿ ಕ್ಲಬ್, ಆಂಗ್ಲ ಭಾಷಾ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.









ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ಸಹ ಪ್ರಾಧ್ಯಪಕರು ಆಗಿರುವ ಪ್ರೊ. ನಂದಕಿಶೋರ್ ಎಸ್. ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ “Career Planning” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ ಪ್ರಸ್ತುತ ಕಾಲಘಟ್ಟಕ್ಕೆ ಅವಶ್ಯಕತೆ ಇರುವಂತಹ ಕೌಶಲ್ಯಗಳನ್ನು ಬೆಳೆಸಿಕೊಳ್ಳುವಂತಹ ಅಗತ್ಯತೆಯನ್ನು ಒತ್ತಿ ಹೇಳಿದರು. ಇಂಗ್ಲೀಷ್ ಭಾಷೆ ಮಾತ್ರವಲ್ಲದೆ ಇನ್ನಿತರ ಭಾಷೆಗಳ ಜ್ಞಾನ ಹೇಗೆ ವಿದ್ಯಾರ್ಥಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ ಎಂದು ಉದಾಹರಣೆ ಸಹಿತ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ ಎಸ್ ರವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಡಾ. ಸುಪ್ರಿಯಾ ಪಿ. ಆರ್. ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾದ ಮನೋಜ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ದೀಕ್ಷಾ ಮತ್ತು ಬಳಗ ಪ್ರಾರ್ಥಿಸಿದರು. ಇಂಗ್ಲೀಷ್ ಲಿಟರರಿ ಕ್ಲಬ್ ನ ಸಂಚಾಲಕರಾದ ಶ್ರೀಮತಿ ಸುರೇಖಾ ಹೆಚ್. ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು ಹಾಗೂ ಅತಿಥಿಗಳನ್ನು ಸ್ವಾಗತಿಸಿದರು. ಕು. ಮೋಹಿನಿ, ದ್ವಿತೀಯ ಬಿ. ಎಸ್. ಡಬ್ಲ್ಯೂ. ಇವರು ವಂದನಾರ್ಪಣೆಗೈದರು. ಕು. ಆಜ್ಞಾಶ್ರೀ ರೈ ಡಿ., ಪ್ರಥಮ ಬಿ.ಎ. ಇವರು ಸಂಪನ್ಮೂಲ ವ್ಯಕ್ತಿಗಳನ್ನು ಸಭೆಗೆ ಪರಿಚಯಿಸಿದರು. ಶ್ರಾವ್ಯ, ಜಿ. ಪಿ., ದ್ವಿತೀಯ ಬಿ. ಕಾಂ. ಕಾರ್ಯಕ್ರಮವನ್ನು ನಿರೂಪಿಸಿದರು.










