ಬೆಳ್ಳಾರೆ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ 2024-2025ನೇ ಸಾಲಿನ ಕಾಲೇಜು ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.















ಕ್ರೀಡಾಕೂಟದ ಉದ್ಘಾಟನೆಯನ್ನು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ
ಸತೀಶ್ ಕುಮಾರ್ ಕೆ ಆರ್ ನೆರವೇರಿಸಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳುವಂತೆ ಕರೆನೀಡಿ ಶುಭ ಹಾರೈಸಿದರು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಾಲಸುಬ್ರಮಣ್ಯ ಪಿ ಎಸ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು, ಹಾಗೂ ವಿದ್ಯಾರ್ಥಿ ಕ್ಷೇಮಪಾಲನಧಿಕಾರಿ ಡಾ.ರಾಮಚಂದ್ರ ಕೆ, ಐಕ್ಯೂಎಸಿ ಸಂಚಾಲಕರಾದ ಡಾ. ಸುಪ್ರಿಯಾ ಪಿ ಆರ್ ಸ್ನಾತಕಕೋತ್ತರ ವಿಬಾಗದ ಕ್ರೀಡಾ ಕಾರ್ಯದರ್ಶಿಗಳಾದ ಚರಣ್, ದ್ವಿತೀಯ ಎಂಎಸ್ ಡಬ್ಲ್ಯೂ, ಜಯಶ್ರೀ ದ್ವಿತೀಯ ಎಂಕಾಂ, ಪದವಿ ವಿಭಾಗದ ಕ್ರೀಡಾ ಕಾರ್ಯದರ್ಶಿಗಳಾದ ಮಧು ಕುಮಾರ್ ತೃತೀಯ ಬಿ ಕಾಂ, ಪ್ರತೀಕ್ಷ ಕುಮಾರಿ ತೃತೀಯ ಬಿಎಸ್ ಡಬ್ಲ್ಯೂ, ಬೋಧಕ ಮತ್ತು ಬೋಧಕೇತರ ವೃಂದ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.










