ಸಂಪಾಜೆ ಪೇರಡ್ಕ ಗೂನಡ್ಕ ಮಸೀದಿಯಲ್ಲಿ ಭಾರತೀಯ ಸೈನಿಕರಿಗೆ ವಿಶೇಷ ಪ್ರಾರ್ಥನೆ

0

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುತ್ತಿದ್ದು, ಭಾರತೀಯರ ಸಂರಕ್ಷಣೆಗಾಗಿ ಶತ್ರುಗಳೊಂದಿಗೆ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಭಾರತೀಯ ಸೈನಿಕರ ಯಶಸ್ಸಿಗೆ ವಿಶೇಷ ಪ್ರಾರ್ಥನೆಯನ್ನು ಸಂಪಾಜೆ ಪೇರಡ್ಕ ಗೂನಡ್ಕ ಮೊಹಿಯದ್ದೀನ್ ಜುಮಾ ಮಸೀದಿಯಲ್ಲಿ ನಡೆಸಲಾಯಿತು.
ದೇಶದ ಸಾಮರಸ್ಯತೆ ಮತ್ತು ಆರ್ಥಿಕತೆಯನ್ನು ಹಾಳುಗೆಡವಲು ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈದ ಉಗ್ರಗಾಮಿಗಳ ಕೇಂದ್ರಗಳ ಮೇಲೆ ಭಾರತೀಯ ಸೈನ್ಯವು ದಾಳಿ ಮಾಡಿ ಸೂಕ್ತ ಪಾಠ ಕಲಿಸಿದ್ದು, ಈ ಸಂದರ್ಭದಲ್ಲಿ ಭಾರತೀಯರಾದ ನಾವೆಲ್ಲರೂ ನಮ್ಮ ಸೈನಿಕರಿಗೆ ನೈತಿಕ ಬೆಂಬಲ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಜುಮಾ ನಮಾಝಿನ ಬಳಿಕ ಪೇರಡ್ಕ ಮಸೀದಿಯಲ್ಲಿ ನಡೆದ ವಿಶೇಷ ಪ್ರಾರ್ಥನಾ ಸಭೆಯಲ್ಲಿ ಸ್ಥಳೀಯ ಖತೀಬರಾದ ಅಹ್ಮದ್ ನಈಂ ಫೈಝಿ ಅಲ್ ಮಅಬರಿ ಹೇಳಿದರು.