














ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 12) ರಾತ್ರಿ ರಾತ್ರಿ ಎಂಟು ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪಹಲ್ಲಾಮ್ ದಾಳಿಯ ಬಳಿಕ ಪಾಕಿಸ್ತಾನ ಉಗ್ರರನ್ನು ಉದ್ದೇಶಿಸಿ ಭಾರತ ನಡೆಸಿದ ‘ಆಪರೇಷನ್ ಸಿಂದೂರ್’ ಯಶಸ್ವಿಯಾಗಿದ್ದು ಎರಡೂ ರಾಷ್ಟ್ರಗಳ ಮಧ್ಯೆಯ ಸಂಘರ್ಷಕ್ಕೆ ಇದೀಗ ವಿರಾಮ ಬಿದ್ದಿದೆ. ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.










