














ರಾ ವಿ ತಾಂತ್ರಿಕ ಮಹಾವಿದ್ಯಾಲಯದ ,ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು ೨೦೨೫ ನೇ ವಾರ್ಷಿಕ ಮಹಾಶಿಬಿರವನ್ನು ಪ್ರಣವ್ ಫೌಂಡೇಶನ್ ರವರ ಸಹಯೋಗದೊಂದಿಗೆ ಜ್ಯೋತಿ ಪ್ರೌಢಶಾಲೆ ಪೆರಾಜೆ, ಮಡಿಕೇರಿ ತಾಲೂಕು, ಕೊಡಗು ಜಿಲ್ಲೆಯಲ್ಲಿ ಮೇ ೧೫ರಿಂದ ಮೇ ೨೧ರವರೆಗೆ ಹಮ್ಮಿಕೊಂಡಿದ್ದಾರೆ. ಪೆರಾಜೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಳ್ಳಡ್ಕರವರು ವಾರ್ಷಿಕ ಶಿಬಿರಕ್ಕೆ ಚಾಲನೆ ನೀಡಿದರು.
ಜ್ಯೋತಿ ಪ್ರೌಢಶಾಲೆಯ ಸ್ಥಾಪಕ ಅಧ್ಯಕ್ಷರಾದ ಡಿ ಪಿ ಪೂವಪ್ಪ ಮತ್ತು ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಡಾ. ಎನ್.ಎ. ಜ್ಞಾನೇಶ್ ರವರು ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಎಂ.ಲೋಕೇಶ್ವರಿರವರು ಮುಖ್ಯ ಅತಿಥಿಗಳನ್ನು ಸ್ವಾಗತಿಸಿ, ಎನ್‌ಎಸ್‌ಎಸ್ ಕಾರ್ಯಕ್ರಮಗಳ ಬಗ್ಗೆ ಹಾಗು ವಾರ್ಷಿಕ ಶಿಬಿರದ ಅಂಗವಾಗಿ ಜ್ಯೋತಿ ಪ್ರೌಢಶಾಲೆ ಮತ್ತು ಪೆರಾಜೆ ಗ್ರಾಮದಲ್ಲಿ ಹಮ್ಮಿಕೊಂಡಿರುವಂತಹ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಪ್ರಣವ್ ಫೌಂಡೇಶನ್ ರವರ ವತಿಯಿಂದ ರಾಕೇಶ್ ರಾಯ್ ಹಾಗು ರಕ್ಷಿತ್, ಜ್ಯೋತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ ಹಾಗು ಕಚೇರಿ ಅಧೀಕ್ಷರಾದ ಶ್ರೀಮತಿ ಚಂದ್ರಮತಿ ಇದ್ದರು.










