ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ

0

ಹೈಕೋರ್ಟ್ ನ ನ್ಯಾಯಮೂರ್ತಿ ಅರವಿಂದ ಅವರು ಮೇ. 15ರಂದು ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಮತ್ತು ಪದಾಧಿಕಾರಿಗಳು ಮತ್ತು ಎರಡೂ ಸಮಿತಿಯ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.