ಸುಳ್ಯದ ಸಾಂದೀಪ್ ಶಾಲೆಯಲ್ಲಿ ತಾಲೂಕು ಬಾಲಭವನ ಸಮಿತಿ ವತಿಯಿಂದ ಅರಳು ಮಲ್ಲಿಗೆ ಬೇಸಿಗೆ ಶಿಬಿರ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಬಾಲಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಇದರ ವತಿಯಿಂದ ಹಾಗೂ ಎಂ ಬಿ ಫೌಂಡೇಶನ್ ಇದರ ಸಹಕಾರದೊಂದಿಗೆ ಬೇಸಿಗೆ ಶಿಬಿರ ಅರಳುಮಲ್ಲಿಗೆ ಮೆ.೧೭ ರಂದು ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಪ್ರಾರಂಭಗೊಂಡಿತು.
ಈ ಶಿಬಿರವು ಮೆ.೨೬ ರವರೆಗೆ ನಡೆಯಲಿದೆ.


ಶಿಬಿರದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಉಸ್ಮಾನ್ ಎ. ನೆರವೇರಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ರಾಜಣ್ಣ, ಸಾಂದೀಪ್ ವಿಶೇಷ ಮಕ್ಕಳ ಶಾಲೆ ಪ್ರಾಂಶುಪಾಲರಾದ ಶ್ರೀಮತಿ ಹರಿಣಿ ಸದಾಶಿವ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ , ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಶಿಬಿರದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಶೈಲಜಾ ರವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಸ್ವಾಗತಿಸಿದರು.
ಕಲಾವಿದ ಪಟ್ಟಾಬಿರಾಮ ರವರಿಂದ ಮಕ್ಕಳಿಗಾಗಿ ಮಿಮಿಕ್ರಿ ಕಾರ್ಯಕ್ರಮ ನಡೆಯಿತು.
ಐಸಿಡಿಸಿ ವಲಯ ಮೇಲ್ವಿಚಾರಕಿ ಶ್ರೀಮತಿ ಜೆ ಡಿ ವಿಜಯ,ಕಛೇರಿ ಸಿಬ್ಬಂದಿಗಳಾದ ಶ್ರೀಮತಿ ಮಲ್ಲಿಕಾ, ಶೋಭಿತಾ ಕಾರ್ಯಕ್ರಮ ನಿರೂಪಿಸಿ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ವಂದನಾರ್ಪಣೆ ಮಾಡಿದರು.