ಮೇ 21 : ಸುಳ್ಯ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಹಾಗೂ ಸರಕಾರಿ ಆಸ್ಪತ್ರೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ

0

ರಕ್ತದಾನಿಗಳು ಭಾಗವಹಿಸುವಂತೆ ಸಂಘಟಕರಿಂದ ಮನವಿ

ಸುಳ್ಯ ಆಂಬುಲೆನ್ಸ್ ಚಾಲಕ ಮಾಲಕ ಸಂಘ, ಸರಕಾರಿ ಆಸ್ಪತ್ರೆ ಸುಳ್ಯ ಹಾಗೂ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಅಕ್ಷಯ ಬ್ಲಡ್ ಡೋನರ್ಸ್ ಇದರ 42ನೇ ರಕ್ತದಾನ ಶಿಬಿರ
ಮೇ.21 ರಂದು ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳ ಲಾಗಿದೆ.

ಇತ್ತೀಚಿನ ದಿನಗಳಲ್ಲಿ ರಕ್ತದ ಬೇಡಿಕೆಗಳು ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಯಾಗಿಸುವಲ್ಲಿ ಸಹಕರಿಸುವಂತೆ ಸಂಘಟಕರು ಪ್ರಕಟಣೆ ಮೂಲಕ ಮನವಿ ಮಾಡಿ ಕೊ0ಡಿದ್ದಾರೆ.