ಬೆಳ್ಳಾರೆಯ ಪೆರುವಾಜೆ ಡಾ. ಕೆ ಶಿವರಾಮ ಕಾರಂತ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

0

ಬೆಳ್ಳಾರೆಯ ಪೆರುವಾಜೆ ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇ. ೨೩ರಂದು ಕನ್ನಡ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಭಾಗಿತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿನ ಕನ್ನಡ ಉಪನ್ಯಾಸಕಿಯಾಗಿರುವ ಶ್ರೀಮತಿ ಸುಲೋಚನಾ ಪಚ್ಚಿನಡ್ಕ
ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ “ಉದ್ಯೋಗವಕಾಶದಲ್ಲಿ ಕನ್ನಡ ” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ ಎಸ್ ರವರು ವಹಿಸಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ರಾಮಚಂದ್ರ ಕೆ ಮತ್ತು ಆಂಗ್ಲ ಭಾಷೆ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುರೇಖಾ ಹೆಚ್ ಉಪಸ್ಥಿತರಿದ್ದು ಕನ್ನಡ ವಿಭಾಗದ ಮುಖ್ಯಸ್ಥರಾದ ಮನೋಜ್ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಕು.ಪ್ರತಿಜ್ಞಕುಮಾರಿ ಬಿ, ಪ್ರಥಮ ಬಿ.ಎ. ಇವರು ಸ್ವಾಗತಿಸಿ, ಮೋಕ್ಷ, ಪ್ರಥಮ ಬಿ ಎ ಇವರು ವಂದನಾರ್ಪಣೆಗೈದರು. ಚರಣ್ ಪಿ, ದ್ವಿತೀಯ ಬಿ.ಎ. ಇವರು ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿದರು. ಆಜ್ಞಾಶ್ರೀ ರೈ ಡಿ, ಪ್ರಥಮ ಬಿ ಎ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.