ನದಿಗಿಳಿಯದಂತೆ ಸೂಚನೆ, ಬ್ಯಾರಿಕೇಡ್ ಅಳವಡಿಕೆ
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮೇ.26 ರ ದಿನ ಪೂರ್ತಿ ಮುಳುಗಡೆಯಾಗಿರುವುದಾಗಿ ತಿಳಿದು ಬಂದಿದೆ.
















ಭಕ್ತಾಧಿಗಳಿಗೆ ಸ್ನಾನಘಟ್ಟಕ್ಕೆ ಇಳಿಯದಂತೆ ಬ್ಯಾರಿಕೇಡ್, ಟೇಪ್ ಅಳವಡಿಸಲಾಗಿದೆ.
ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಗಳ ನೇಮಕ ಮಾಡಲಾಗಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಸಂಜೆ ಅಧಿಕಾರಿಗಳು ಭೇಟಿ ಇತ್ತು ಪರಿಶೀಲನೆ ನಡೆಸಿದ್ದಾರೆ.










