ಸರಕಾರದ ವೈಫಲ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಎ.ಕೆ.ಇಬ್ರಾಹಿಂ ರಾಜೀನಾಮೆ

0

ಇತ್ತೀಚೆಗೆ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳನ್ನು ತಡೆಯುವಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತ ಪಡಿಸಿರುವ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಸಂಪಾಜೆಯ ಎ.ಕೆ.ಇಬ್ರಾಹಿಂ ರವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಾರಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಾಗ ಅಲ್ಪಸಂಖ್ಯಾತರು ಕನಿಷ್ಠ ನೆಮ್ಮದಿಯಾದರೂ ಇದ್ದೀತು ಎನ್ನುವ ಆಶಯವನ್ನು ವ್ಯಕ್ತಪಡಿಸಿದ್ದರು. ನಮ್ಮ ಸರಕಾರ ಕರಾವಳಿಯ ಕೋಮು ಸೌಹಾರ್ದತೆಗಾಗಿ ಹಾಕಿಕೊಂಡ ಕಾರ್ಯಯೋಜನೆಯಂತೆ ಸರಕಾರ ನಡೆದುಕೊಳ್ಳಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಇದೀಗ ಆ ನಿರೀಕ್ಷೆ ಹುಸಿಯಾಗುತ್ತಿದ್ದು. ಅಮಾಯಕರ ಜೀವಹರಣ ನಡೆಯುತ್ತಿದೆ. ದ.ಕ. ಜಿಲ್ಲೆಯಲ್ಲಿ ನಮ್ಮ ಸರಕಾರ ಇರುವಾಗಲೇ ಕಾನೂನು ಪಾಲಕರ ಮಲತಾಯಿ ಧೋರಣೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಎಲ್ಲಾ ಕೊಲೆಗಳಿಗೆ ನಮ್ಮ ಸರಕಾರದ ಗೃಹ ಸಚಿವರ ಆಡಳಿತ ವೈಫಲ್ಯ ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಈ ಕಾರಣದಿಂದ ಜನಸಾಮಾನ್ಯರ ಪ್ರಶ್ನೆಗೆ ಉತ್ತರಿಸಲೂ ಕಷ್ಟವಾಗುತ್ತಿದ್ದು , ಎಲ್ಲೋ ಒಂದು ಕಡೆ ಈ ಘಟನೆಗಳಿಗೆ ನಾನೂ ಭಾಗಿಯಾಗುತ್ತಿರುವೆನೇ ಎನ್ನುವ ಭಾವನೆ ಸೃಷ್ಟಿಯಾಗಿದೆ. ನಮ್ಮ ಭಾವನೆಗಳಿಗೆ ಈ ಸರಕಾರ ಸ್ಪಂದಿಸುತ್ತಿಲ್ಲ ಎನ್ನುವ ಕಾರಣಕ್ಕೆ ಬೇಸತ್ತು ನನ್ನ ದ.ಕ.ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಶಾಹುಲ್ ರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಇಬ್ರಾಹಿಂ ತಿಳಿಸಿದ್ದಾರೆ.