ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು, ಅದನ್ನು ತಡೆಯುವಲ್ಲಿ ರಾಜ್ಯ ಸರಕಾರದ ಗೃಹ ಇಲಾಖೆ ವೈಫಲ್ಯ ಆರೋಪ

0

ಸುಳ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರುಗಳ ರಾಜೀನಾಮೆ

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಹಮ್ಮದ್ ಕುಂಞ ಗೂನಡ್ಕ, ಸುಳ್ಯ ಬ್ಲಾಕ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷತೆಗೆ ಇಸ್ಮಾಯಿಲ್ ಪಡ್ಪಿನಂಗಡಿ ರಾಜೀನಾಮೆ

ಕರಾವಳಿ ಯಲ್ಲಿ ಕೋಮು ಸಾಮರಸ್ಯ ಹದಗೆಡುತ್ತ ಬಂದಿದ್ದು. ಕೋಮು ವೈಷಮ್ಯಗಳಿಂದ ಹತ್ಯೆಗೀಡಾದ ಬಂಟ್ವಾಳದ ಅಬ್ದುಲ್ ರಹ್ಮಾನ್ ಸೇರಿದಂತೆ ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಕೋಮು ಹತ್ಯೆಗಳನ್ನು ಮಟ್ಚ ಹಾಕಲು ವಿಫಲರಾದ ಆಡಳಿತ ವ್ಯವಸ್ಥೆಯ ವಿರುದ್ದ ಬೇಸತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಹಮ್ಮದ್ ಕುಂಞಿ ಗೂನಡ್ಕ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಸ್ಮಾಯಿಲ್ ಪಡ್ಪಿನಂಗಡಿ ರವರು ರಾಜೀನಾಮೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನ ಶಾದಿ ಮಹಲ್ ನಲ್ಲಿ ಇಂದು ನಡೆದ ಕಾಂಗ್ರೆಸ್ ಮುಸ್ಲಿಂ ಮುಖಂಡರ ಸಭೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.