ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.
ಬೆಳಗ್ಗೆ ಎಲ್ಲಾ ವಿಧ್ಯಾರ್ಥಿಗಳಿಗೆ ಆರತಿ ಬೆಳಗಿಸಿ, ಪುಷ್ಪಾರ್ಚನೆಗೈದು, ತಿಲಕವಿಟ್ಟು ಶಾಲಾಭಿವೃದ್ದಿ ಸಮಿತಿ ಸದಸ್ಯರು ಮತ್ತು ಅಧ್ಯಾಪಕ ವೃಂದದವರು ಶಾಲಾ ಆವರಣಕ್ಕೆ ಬರಮಾಡಿಕೊಂಡರು.















ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಬಲೂನ್ ನೀಡಿ ಸ್ವಾಗತಿಸಲಾಯಿತು.
ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಹೊಸದಾಗಿ ಪ್ರವೇಶಾತಿ ಪಡಕೊಂಡ ವಿದ್ಯಾರ್ಥಿಗಳಿಗೆ ಪುಸ್ತಕ ಪರಿಕರಗಳನ್ನು ನೀಡಲಾಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳಿಂದ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪೆರಾಜೆ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಅತ್ಯಾಡಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸಾವಿತ್ರಿ ಕಣೆಮರಡ್ಕ, ಜಯಶ್ರೀ ತೋಟಪ್ಪಾಡಿ, ಉಪಸ್ಥಿತರಿದ್ದರು. ಶಾಲಾ ಸಹಶಿಕ್ಷಕಿ ವನಿತಾ ಕುಮಾರಿ ಸ್ವಾಗತಿಸಿ, ಗೌರವ ಶಿಕ್ಷಕಿ ಪ್ರಮೀಳಾ ವಂದಿಸಿದರು. ಶಾಲಾ ಸಹಶಿಕ್ಷಕ ರಮೇಶ್ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಊರ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.










