ಅರಂಬೂರು ಪಾಲಡ್ಕ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಪ್ರಯಾಣಿಕರಿಗೆ ಗಾಯವಾದ ಘಟನೆ ಜೂನ್ 3 ರಂದು ಸಂಭವಿಸಿದೆ.















ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಇನ್ನೋವಾ ಕಾರು ಮತ್ತು ಮಡಿಕೇರಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರುಗಳ ನಡುವೆ ಪಾಲಡ್ಕ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು, ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಕಾರುಗಳ ಜಖಂ ಗೊಂಡಿದೆ.










